ಹೊಳೆನರಸೀಪುರ: ಶಾಸಕ ಹೆಚ್.ಡಿ ರೇವಣ್ಣನವರು, ಎಪ್ರಿಲ್ 17ರ ಸೋಮವಾರ ಬೆಳಿಗ್ಗೆ 9.15 ಗಂಟೆಗೆ, ಪಟ್ಟಣದ ಆರಾಧ್ಯ ದೈವ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿಯವರ ದೇವಾಲಯದಲ್ಲಿ ಪೂಜೆಯನ್ನು ಸಲ್ಲಿಸಿ, ತಮ್ಮ ಅಪಾರ ಬೆಂಬಲಿಗರೊಂದಿಗೆ, ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರ ಸಮ್ಮುಖದಲ್ಲಿ ಬೃಹತ್ ಮೆರವಣಿಗೆಯೊಂದಿಗೆ, ಕೋಟೆ ಮುಖ್ಯ ರಸ್ತೆಯ ಮೂಲಕ, ಜಯಚಾಮರಾಜೇಂದ್ರ ವೃತ್ತದ ಮಹಾತ್ಮಾ ಗಾಂಧಿಯವರ ಪ್ರತಿಮೆ, ಡಾ. ಬಿ.ಆರ್ ಅಂಬೇಡ್ಕರ್ ಅವರ ವೃತ್ತದ ಮೂಲಕ ಸಾಗಿ, ಮಧ್ಯಾನ್ಹ 12.15 ಗಂಟೆಗೆ ತಾಲೂಕು ಕಛೇರಿಯಲ್ಲಿ ಚುನಾವಣಾ ಅಧಿಕಾರಿಗಳಿಗೆ, 2023ನೇ ಸಾಲಿನ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ನಾಮಪತ್ರವನ್ನು ಸಲ್ಲಿಸಲಿದ್ದಾರೆಂದು ತಾಲೂಕು ಜೆಡಿಎಸ್ ಅಧ್ಯಕ್ಷರಾದ ಹೆಚ್.ಎಸ್ ಪುಟ್ಟಸೋಮಪ್ಪ ಮಾಧ್ಯಮಗಳಿಗೆ ಮಾಹಿತಿಯನ್ನು ನೀಡಿದ್ದಾರೆ.
ಶಾಸಕ ಹೆಚ್.ಡಿ.ರೇವಣ್ಣ ನಾಮಪತ್ರವನ್ನು ಸಲ್ಲಿಸುವ ಮೆರವಣಿಗೆಯಲ್ಲಿ ತಾಲೂಕಿನ ಎಲ್ಲಾ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಜೆಡಿಎಸ್ ಪಕ್ಷದ ವತಿಯಿಂದ ಎಲ್ಲರಿಗೂ ವಿನಂತಿಸಲಾಗಿದೆ.