ಅರಸೀಕೆರೆ: ವಿಧಾನಸಭಾ ಕ್ಷೇತ್ರದಲ್ಲಿ ನಾವು ಗ್ರಾಮಗಳಿಗೆ ಭೇಟಿ ನೀಡಿದಾಗ ನಮ್ಮ ಪಕ್ಷದ ಅಭಿವೃದ್ಧಿ ಕಾರ್ಯಕ್ರಮಗಳನ್ನು ನೋಡಿ ನಮಗೆ ಜನ ಬೆಂಬಲ ನೀಡುತ್ತಿದ್ದಾರೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಪಕ್ಷದ ಸಿದ್ಧಾಂತಗಳಿಗೆ ಬದ್ಧರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಜಿ.ವಿ .ಬಸವರಾಜ ತಿಳಿಸಿದರು.
ಮೇ 5ನೇ ತಾರೀಕು ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಬಿವೈ ವಿಜಯೇಂದ್ರ ಇವರು ಪಕ್ಷದ ಅಭ್ಯರ್ಥಿ ಜಿ.ವಿ.ಬಸವರಾಜ ಪರವಾಗಿ ನಗರದ ಸಾಧನಾ ಟಾಕೀಸನಿಂದ ರಾಷ್ಟ್ರೀಯ ಹೆದ್ದಾರಿ 206 ಮೂಲಕ ಕೆವಿ ಪೆಟ್ರೋಲ್ ಬಂಕ್‌ವರೆಗೆ ರೋಡ್ ಶೋ ಮೂಲಕ ಪ್ರಚಾರ ನಡೆಸಲಿದ್ದಾರೆ ಎಂದು ಅರಸೀಕೆರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ.ವಿ.ಬಸರಾಜ್ ಅವರು ಅವರ ಮನೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಬಿಜೆಪಿ ನಗರಾಧ್ಯಕ್ಷ ಪುರುಷೋತ್ತಮ್, ಅಣ್ಣ ನಾಯಕನಹಳ್ಳಿ ವಿಜಯಕುಮಾರ್, ಇನ್ನಿತರ ಮುಖಂಡರು ಉಪಸ್ಥಿತರಿದ್ದರು.