ಆಲೂರು: ಜೆಡಿಎಸ್ ಪಂಚರತ್ನ ಯಾತ್ರೆಯು ಮಾ.೧೭ರ ಶುಕ್ರವಾರ ಮದ್ಯಾಹ್ನ ೨ ಗಂಟೆಗೆ ಆಲೂರು ತಾಲೂಕಿಗೆ ಆಗಮಿಸಲಿದ್ದು, ಅದೇ ದಿನ ಪಟ್ಟಣದ ಬಿಕ್ಕೋಡು ರಸ್ತೆಯ ಎಡಭಾಗದ ವಿಶಾಲವಾದ ಜಾಗದಲ್ಲಿ ಬೃಹತ್ ಬಹಿರಂಗ ಸಭೆ ಆಯೋಲಿಸಲಾಗಿದ್ದು, ಕಾರ್ಯಕ್ರಮ ನೆಡೆಯುವ ಸ್ಥಳದಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ಕೆ.ಎಸ್. ಮಂಜೇಗೌಡರು ಮುಕ್ಕಾಂ ಹೂಡಿ ಕಾರ್ಯಕ್ರಮದ ಸಿದ್ದತೆಯನ್ನು ವೀಕ್ಷಿಸಿ ಸ್ಥಳವನ್ನು ಸಮತಟ್ಟು ಮಾಡಿಸುವ ಕೆಲಸದಲ್ಲಿ ನಿರತರಾಗಿದ್ದರು. ಕಾರ್ಯಕ್ರಮ ನೆಡೆಯುವ ಸ್ಥಳದಲ್ಲಿ ಸಿದ್ದತೆಗಳು ಭರದಿಂದ ಸಾಗಿವೆ.
ಈ ಸಂಬಂಧ ಪತ್ರಿಕೆಯೊಂದಿಗೆ ಮಾತನಾಡಿದ ಜೆಡಿಎಸ್ ತಾಲೂಕು ಅಧ್ಯಕ್ಷ ಕೆ.ಎಸ್ ಮಂಜೇಗೌಡ, ದಿನಾಂಕ ೧೭.೩.೨೦೨ರ ಶುಕ್ರವಾರ ಮದ್ಯಾಹ್ನ ೨ ಗಂಟೆಗೆ ಸಕಲೇಶಪುರ ವಿಧಾನಸಭಾ ಕ್ಷೇತ್ರದ ಆಲೂರು ತಾಲೂಕಿಗೆ ಜೆಡಿಎಸ್ ಪಂಚರತ್ನ ಯಾತ್ರೆಯು ಆಗಮಿಸುತ್ತಿದ್ದು, ಈ ಯಾತ್ರೆಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಮಾಜಿ ಮುಖ್ಯ ಮಂತ್ರಿ ಹೆಚ್.ಡಿ ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ. ಎಂ. ಇಬ್ರಾಹಿಂ, ಮಾಜಿ ಸಚಿವ ಹೆಚ್.ಡಿ ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ, ಶಾಸಕ ಹೆಚ್.ಕೆ ಕುಮಾರಸ್ವಾಮಿ, ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಸೇರಿದಂತೆ ಜೆಡಿಎಸ್ ಪಕ್ಷದ ಅಗ್ರಗಣ್ಯ ನಾಯಕರು ಸಭೆಯಲ್ಲಿ ಭಾಗವಹಿಸುತ್ತಿದ್ದು, ಕಾರ್ಯಕ್ರಮಕ್ಕೆ ೧೨ ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರು, ಅಭಿಮಾನಿಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರುಗಳಾದ ಯೋಗೇಶ್, ಕೆ.ವಿ ಮಲ್ಲಿಕಾರ್ಜುನ್, ಡಿ. ರಾಮಣ್ಣ, ಪಾಣಿ, ಜಯ, ಪ್ರಶಾಂತ ಗಾಂಧಿ, ಕೃಷ್ಣೆಗೌಡ, ಶಂಕ್ರಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.