ಹಾಸನ: ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ಹಾಸನದಲ್ಲಿ ಅಭಿವೃದ್ಧಿ ಕಡೆ ಮತ್ತಷ್ಟು ಗಮನಹರಿಸಿರುವುದಾಗಿ ಪ್ರೀತಂಗೌಡ ಅಭಿಪ್ರಾಯ ವ್ಯಕ್ತಪಡಿಸಿದರು.
ವಿದಾನಸಭೆ ಚುನಾವಣೆ ನಂತರ ಮೊದಲ ಬಾರಿಗೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ 120 ಸ್ಥಾನ ಪಡೆಯುವ ಮೂಲಕ ಸರ್ಕಾರ ರಚನೆಯಾಗಲಿದೆ. ಹಾಸನದಲ್ಲಿ ಸಹ ಅಭಿವೃದ್ಧಿ ಕಾರ್ಯ ಮುಂದುವರೆಯಲಿದೆ ಎಂದರು. ಈ ಚುನಾವಣೆಯಲ್ಲಿ ಎಷ್ಟು ಮತದ ಅಂತರದಲ್ಲಿ ಗೆಲುವು ಪಡೆಯುವ ವಿಚಾರಕ್ಕಿಂತ, ಮುಂದಿನ ದಿನಗಳಲ್ಲಿ ಹಿರಿಯರ ಮಾರ್ಗದರ್ಶನದಲ್ಲಿ ತಗ್ಗಿಬಗ್ಗಿ ಹಾಸನದ ಅಭಿವೃದ್ಧಿಗೆ ಶ್ರಮಿಸುವುದಾಗಿ ಹೇಳಿದರು.
ಕಳೆದ 5 ವರ್ಷದ ಅಭಿವೃದ್ಧಿ ಕೆಲಸಕ್ಕೆ ಜನರು ಗೌರವ ನೀಡಿದ್ದು, ಇಷ್ಟು ಪ್ರಮಾಣದಲ್ಲಿ ಬೆಂಬಲಿಸುತ್ತಾರೆ ಎಂದು ಎಣಿಸಿರಲಿಲ್ಲ, ಗೆಲ್ಲುವ ವಿಶ್ವಾಸ ಇದೆ, 276 ಬೂತ್‌ನಲ್ಲು ಬಿಜೆಪಿಗೆ ಜನರು ಬೆಂಬಲ ವ್ಯಕ್ತಪಡಿಸಿದ್ದಾರೆ. ಕಾರ್ಯಕರ್ತರು ಪ್ರತಿ ಬೂತ್ ನಲ್ಲಿ ಪ್ರಚಾರ ನಡೆಸಿದ್ದಾರೆ ಎಂದರು.