ಬೇಲೂರು: ಜೆಡಿಎಸ್ ಭದ್ರಕೋಟೆ ಎಂದು ಬಿಂಬಿಸಿಕೊಂಡಿದ್ದನ್ನು ಈ ಬಾರಿ ಛಿದ್ರ ಮಾಡಿ ಜಿಲ್ಲೆಯಲ್ಲಿ ಬಿಜೆಪಿ ಬಾವುಟ ಹಾರಿಸಲಿದ್ದೇವೆ ಎಂದು ಜಿಲ್ಲಾ ಎಸ್‌ಸಿ/ಎಸ್‌ಟಿ ಮೋರ್ಚಾ ಮಾಜಿ ಅಧ್ಯಕ್ಷ ಎಚ್. ಆರ್. ನಾರಾಯಣ ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಹಾಸನ ಜಿಲ್ಲೆ ತನ್ನದೇ ಆದ ರಾಜಕೀಯ ಶಕ್ತಿಯನ್ನು ಹೊಂದಿದ್ದು ಜೆಡಿಎಸ್ ಭದ್ರಕೋಟೆ ಎಂದು ಹೇಳುತ್ತಾರೆ. ಈ ಬಾರಿಯ ಚುನಾವಣೆಯಲ್ಲಿ ಜಿಲ್ಲೆಯ ಐದು ಕ್ಷೆತ್ರಗಳನ್ನು ವಶಪಡಿಸಿಕೊಳ್ಳಲಿದ್ದೇವೆ, ಎಸ್‌ಸಿ/ಎಸ್‌ಟಿ ಸಮುದಾಯಕ್ಕೆ ನ್ಯಾಯ ಒದಗಿಸಿ ಕೊಟ್ಟಿದ್ದು ಬಿಜೆಪಿ, ಸುಮಾರು ವರ್ಷಗಳಿಂದ ಮೀಸಲಾತಿಗಾಗಿ ಹೋರಾಟ ಮಾಡಿಕೊಂಡು ಬಂದಿದ್ದರೂ ಯಾವುದೇ ಸರ್ಕಾರಗಳು ಜಾರಿಗೆ ತರಲು ಸಾಧ್ಯವಾಗಿರಲಿಲ್ಲ. ಆದರೆ ರಾಜ್ಯದ ಸುಮಾರು 103 ಒಳ ಪಂಗಡಗಳಿಗೆ ಅನುಕೂಲ ಮಾಡಿಕೊಟ್ಟ ಪಕ್ಷವೆಂದರೆ ಅದು ಏಕೈಕ ಪಕ್ಷ ಬಿಜೆಪಿ. ರಾಜ್ಯದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರವುದರಲ್ಲಿ ಸಂಶಯವಿಲ್ಲ, ಜಿಲ್ಲೆಯಲ್ಲಿ ಐದು ಸ್ಥಾನಗಳನ್ನು ಗೆಲ್ಲಲಿದ್ದು, ಅದರಲ್ಲಿ ಹಾಸನ, ಬೇಲೂರು, ಹೊಳೆನರಸೀಪುರ, ಸಕಲೇಶಪುರ, ಅತೀ ಸುಲಭವಾಗಿ ಸುಮಾರು 20 ಸಾವಿರ ಮತಗಳಿಂದ ನಮ್ಮ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದರು.
ಜಿಲ್ಲಾ ಎಸ್‌ಸಿ/ಎಸ್‌ಟಿ ಮಾಜಿ ಕಾರ್ಯದರ್ಶಿ ತೆಂಡೆಕೆರೆ ರಮೇಶ, ಜಿಲ್ಲಾ ಎಸ್‌ಸಿ/ಎಸ್‌ಟಿ ಮೋರ್ಚಾ ಮಾಜಿ ಉಪಾಧ್ಯಕ್ಷ ಜುಂಜಯ್ಯ ಇದ್ದರು.