ಚನ್ನರಾಯಪಟ್ಟಣ: ಮಾ.1ರ ಬುಧವಾರ ಮಧ್ಯಾಹ್ನ 3 ಗಂಟೆಗೆ ಕಾಂಗ್ರೆಸ್ ಪ್ರಜಾಧ್ವನಿ ಸಮಾವೇಶ ಪಟ್ಟಣದ ಮಾಧ್ಯಮಿಕ ಶಾಲಾ ಆವರಣದಲ್ಲಿ ನಡೆಯಲಿದೆ ಎಂದು ಶಾಸಕ ಸಿ.ಎಸ್. ಪುಟ್ಟೇಗೌಡ ತಿಳಿಸಿದರು.
ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯ ನಾಯಕರು ಕೆ. ಶಿವಕುಮಾರ್, ಧ್ರುವ ನಾರಾಯಣ್, ಡಿ.ಕೆ.ಸುರೇಶ, ಎಚ್.ಎಂ. ರೇವಣ್ಣ, ಬಿ.ಸಿ. ಚಂದ್ರಶೇಖರ ಅವರನ್ನು ಕಾಂಗ್ರೆಸ್ ಕಚೇರಿಯಿಂದ ಮೆರವಣಿಗೆ ಮೂಲಕ ಸಮಾವೇಶಕ್ಕೆ ಕರೆ ತರಲಾಗುವುದು ಎಂದರು. ಶ್ರವಣ ಬೆಳಗೊಳ ಕ್ಷೇತ್ರದಿಂದ ಸುಮಾರು 15 ಸಾವಿರ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಹೇಳಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜೇತೇನಹಳ್ಳಿ ರಾಮಚಂದ್ರ ಮಾತನಾಡಿ, ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದಿಂದ ನಮ್ಮ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾಜಿ ವಿಧಾನಸಭಾ ಸದಸ್ಯ ಎಂ.ಎ. ಗೋಪಾಲಸ್ವಾಮಿ, ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಎಚ್.ಎಸ್. ವಿಜಯಕುಮಾರ, ಕಾಂಗ್ರೆಸ್ ಮುಖಂಡ ಪಿ.ಎ. ಮಂಜಣ್ಣ ಇತರರು ಇದ್ದರು.