ಹಾಸನ: ಹಾಸನ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರದ ಅಂತಿಮ ಫಲಿತಾಂಶದ ವಿವರ ಪ್ರಕಟಗೊಂಡಿದೆ.
1.ಹಾಸನ ವಿಧಾನಸಭಾ ಕ್ಷೇತ್ರ ಫಲಿತಾಂಶ: ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಪ್ರಕಾಶ್ ಅವರು 85,176 ಮತಗಳನ್ನು ಗಳಿಸಿದ್ದು, ಬಿಜೆಪಿ ಅಭ್ಯರ್ಥಿ ಪ್ರೀತಂಗೌಡ ಅವರು 77,322 ಮತಗಳನ್ನು ಗಳಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಪ್ರಕಾಶ್ ಅವರು 7,854 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಬನವಾಸೆ ರಂಗಸ್ವಾಮಿ 4,305 ಮತಗಳನ್ನು ಗಳಿಸಿದ್ದು, ಆಪ್ ಅಭ್ಯರ್ಥಿ ಅಗಿಲೆ ಯೋಗೇಶ್ 1,301 ಮತಗಳನ್ನು ಪಡೆದುಕೊಂಡಿದ್ದಾರೆ.
2.ಹೊಳೆನರಸೀಪುರ ವಿಧಾನಸಭಾ ಕ್ಷೇತ್ರ: ಜೆಡಿಎಸ್ ಅಭ್ಯರ್ಥಿ ಹೆಚ್.ಡಿ.ರೇವಣ್ಣ ಅವರು 86,401 ಮತಗಳನ್ನು ಗಳಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ 83,747 ಮತಗಳನ್ನು ಗಳಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ಹೆಚ್.ಡಿ ರೇವಣ್ಣ ಅವರು 2,654 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ದೇವರಾಜೇಗೌಡ ಅವರು 4,666 ಮತಗಳನ್ನು ಪಡೆದುಕೊಂಡಿದ್ದಾರೆ.
3.ಬೇಲೂರು ವಿಧಾನಸಭಾ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಹೆಚ್.ಕೆ.ಸುರೇಶ್ ಅವರು 63,571 ಮತಗಳನ್ನು ಗಳಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಬಿ.ಶಿವರಾಮ್ ಅವರು 55,835 ಮತಗಳನ್ನು ಗಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಹೆಚ್.ಕೆ.ಸುರೇಶ್ ಅವರು 7,736 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ಕೆ.ಎಸ್.ಲಿಂಗೇಶ್ ಅವರು 38,893 ಮತಗಳನ್ನು ಪಡೆದುಕೊಂಡಿದ್ದಾರೆ.
4.ಅರಕಲಗೂಡು ವಿಧಾನಸಭಾ ಕ್ಷೇತ್ರ: ಜೆಡಿಎಸ್ ಅಭ್ಯರ್ಥಿ ಎ.ಮಂಜು ಅವರು 67,499 ಮತಗಳನ್ನು ಗಳಿಸಿದ್ದು, ಪಕ್ಷೇತರ ಅಭ್ಯರ್ಥಿ ಕೃಷ್ಣೇಗೌಡ ಅವರು 48,620 ಮತಗಳನ್ನು ಗಳಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ಎ.ಮಂಜು ಅವರು 18,879 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶ್ರೀಧರ್ ಗೌಡ ಅವರು 33,084 ಮತಗಳನ್ನು ಗಳಿಸಿದ್ದು, ಬಿಜೆಪಿ ಅಭ್ಯರ್ಥಿ ಯೋಗಾರಮೇಶ್ ಅವರು 18,477 ಮತಗಳನ್ನು ಪಡೆದುಕೊಂಡಿದ್ದಾರೆ.
5.ಸಕಲೇಶಪುರ ವಿಧಾನಸಭಾ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಸಿಮೆಂಟ್ ಮಂಜು ಅವರು 58,604 ಮತಗಳನ್ನು ಗಳಿಸಿದ್ದು, ಜೆಡಿಎಸ್ ಅಭ್ಯರ್ಥಿ ಹೆಚ್.ಕೆ.ಕುಮಾರಸ್ವಾಮಿ ಅವರು 56,548 ಮತಗಳನ್ನು ಪಡೆದುಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಸಿಮೆಂಟ್ ಮಂಜು ಅವರು 2,056 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮುರುಳಿಮೋಹನ್ ಅವರು 42,811 ಮತಗಳನ್ನು ಪಡೆದುಕೊಂಡಿದ್ದಾರೆ.
6.ಅರಸೀಕೆರೆ ವಿಧಾನಸಭಾ ಕ್ಷೇತ್ರ: ಕಾಂಗ್ರೆಸ್ ಅಭ್ಯರ್ಥಿ ಕೆ.ಎಂ.ಶಿವಲಿಂಗೌಡ ಅವರು 97,099 ಮತಗಳನ್ನು ಗಳಿಸಿದ್ದು, ಜೆಡಿಎಸ್ ಅಭ್ಯರ್ಥಿ ಎನ್.ಆರ್ ಸಂತೋಷ್ ಅವರು 77,006 ಮತಗಳನ್ನು ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ.ಎಂ.ಶಿವಲಿಂಗೌಡ ಅವರು 20,093 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಜಿವಿಟಿ ಬಸವರಾಜ್ ಅವರು 6,456 ಮತಗಳನ್ನು ಪಡೆದುಕೊಂಡಿದ್ದಾರೆ.
7.ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರ: ಜೆಡಿಎಸ್ ಅಭ್ಯರ್ಥಿ ಸಿ.ಎನ್.ಬಾಲಕೃಷ್ಣ ಅವರು 85,668 ಮತಗಳನ್ನು ಗಳಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಎಂ.ಎ.ಗೋಪಾಲಸ್ವಾಮಿ ಅವರು 79,023 ಮತಗಳನ್ನು ಗಳಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ಸಿ.ಎನ್.ಬಾಲಕೃಷ್ಣ ಅವರು 6,645 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಚಿದಾನಂದ್ ಅವರು 5,648 ಮತಗಳನ್ನು ಪಡೆದುಕೊಂಡಿದ್ದಾರೆ.