ಹಾಸನ: ಧರ್ಮ ಹಾಸನ್ ಇವೆಂಟ್ಸ್, ಪವರ್ ಡ್ಯಾನ್ಸ್ ಅಕಾಡೆಮಿ ವತಿಯಿಂದ ನಗರದಲ್ಲಿ ನಡೆದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದ ಸಾಂಸ್ಕೃತಿಕ ಕಾರ್ಯಕ್ರಮಗಳು ಮೇ 25 ರಂದು ಏರ್ಪಡಿಸಲಾಗಿದೆ ಎಂದು ಆಯೋಜಕರಾದ ಹಾಗೂ ಕಾಮಿಡಿ ಕಿಲಾಡಿಗಳು ಖ್ಯಾತಿಯ ಧರ್ಮ ಹಾಸನ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನಗರದ ವಿಜಯನಗರ ಬಡಾವಣೆಯಲ್ಲಿ ಕಳೆದ ಏಪ್ರಿಲ್ 3 ರಿಂದ 30 ರವರೆಗೆ ಆಯೋಜಿಸಿದ್ದ ಬೇಸಿಗೆ ಶಿಬಿರ ಯಶಸ್ವಿಯಾಗಿ ನಡೆಯಿತು ಎಂದರು. ಈ ಹಿನ್ನೆಲೆಯಲ್ಲಿ ಮೇ 25 ರಂದು ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಸಂಜೆ 4 ಗಂಟೆಗೆ ಆಯೋಜಿಸಿರುವ ಸಮಾರೋಪ ಸಮಾರಂಭದಲ್ಲಿ ಜಿ ಕನ್ನಡ ವಾಹಿನಿಯ ಕಲಾವಿದರಿಂದ ಸಂಗೀತ ಮನರಂಜನಾ ಹಾಗೂ ಹಾಸ್ಯಾ ಮತ್ತು ಮಿಮಿಕ್ರಿ ಕಾರ್ಯಕ್ರಮ ನಡೆಯಲಿದೆ. ಸಾರ್ವಜನಿಕರಿಗೆ ಉಚಿತ ಪ್ರವೇಶ ಅವಕಾಶ ಕಲ್ಪಿಸಲಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೃಷ್ಣೇಗೌಡ, ಮಂಜುಳಾ, ಶಾಂತ ರಾಜ್ ಇದ್ದರು.