ಹಾಸನ: ಪ್ರತಿ ತಾಲೂಕಿಗೆ ನೀಡಲಾಗುವ ೨೦೨೧-೨೨ ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಈ ಭಾರಿ ಅನುಘಟ್ಟ ಗ್ರಾಮ ಪಂಚಾಯಿತಿಗೆ ದೊರತಿದೆ.
ಕರ್ನಾಟಕ ಸರಕಾರದಿಂದ ಪ್ರತಿ ತಾಲೂಕಿಗೆ ನೀಡಲಾಗುವ ಗಾಂಧಿ ಗ್ರಾಮ ಪುರಸ್ಕಾರ ಬೇಲೂರು ತಾಲೂಕಿನ ಅನುಘಟ್ಟ ಗ್ರಾಮ ಪಂಚಾಯಿತಿಗೆ ಲಭಿಸಿದ್ದು, ಗ್ರಾಮೀಣ ಜನರಿಗೆ ಅತ್ಯಾವಶ್ಯಕವಾದ ಮೂಲಭೂತ ಸೌಕರ್ಯಗಳನ್ನು ಒದಗಿಸಿದ್ದು ಹಾಗೂ ಗ್ರಾಮ ಪಂಚಾಯಿತಿ ಸ್ವಯಂ ಪ್ರೇರಣೆಯಿಂದ ಕೈಗೊಳ್ಳಲಾದ ವಿನೂತನ ಚಟುವಟಿಕೆಗಳು ಹಾಗೂ ಸರ್ಕಾರವು ಕಾಲ-ಕಾಲಕ್ಕೆ ರೂಪಿಸಿದ ಕಾರ್ಯಕ್ರಮಗಳನ್ನು ನಿರ್ವಹಿಸಿ ಹಾಗೂ ಪಂಚಾಯಿತಿ ವ್ಯಾಪ್ತಿಯ ಜನರ ಜೀವನ ಗುಣಮಟ್ಟ ಸುಧಾರಿಸಲು ಹಲವಾರು ಕ್ರಮಗಳು, ಸ್ವಚ್ಛತೆ, ಉದ್ಯೋಗ ಖಾತ್ರಿ ಯೋಜನೆಯಲ್ಲಿ ಪ್ರಗತಿ, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿರುವ ಸಾಧನೆಯಿಂದ ಅನುಘಟ್ಟ ಗ್ರಾ.ಪಂ.ಗೆ ಗಾಂಧಿ ಗ್ರಾಮ ಪುರಸ್ಕಾರ ಲಭಿಸಿದೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಗಾಂಧಿ ಗ್ರಾಮ ಪುರಸ್ಕಾರ ಹಾಗೂ ನರೇಗಾ ಹಬ್ಬ ಪ್ರಶಸ್ತಿ ಕಾರ್ಯಕ್ರಮದಲ್ಲಿ ಅನುಘಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷೆ ದೀಪು ಬೆಳ್ಳಾವರ, ಉಪಾಧ್ಯಕ್ಷೆ ಲಲಿತ ಕಣಗುಪ್ಪೆ ಹಾಗೂ ಸದಸ್ಯರು, ಸಿಬ್ಬಂದಿಗಳು ಹಾಜರಿದ್ದರು.