ಹಾಸನ: ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಮುದಾಯ ವೈದ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಸುಮನ .ಎಂ ಇವರು 2021-22ನೇ ಸಾಲಿನಲ್ಲಿ ದೆಹಲಿಯ ರಾಷ್ಟ್ರೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆಯು ನಡೆಸಿದ ಸ್ನಾತಕೋತ್ತರ ಡಿಪ್ಲೋಮಾ ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ ಪ್ರಥಮ ರ್‍ಯಾಂಕ್ ಪಡೆದಿರುತ್ತಾರೆ.
ಇವರು ನವದೆಹಲಿಯಲ್ಲಿ ನಡೆದ ಪದವಿ ಪ್ರಧಾನ ಸಮಾರಂಭದಲ್ಲಿ ಪ್ರಮಾಣ ಪತ್ರವನ್ನು ಪಡೆಯಲು ಸಾದ್ಯವಾಗದಿದ್ದ ಕಾರಣ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಆರೋಗ್ಯ ಇಲಾಖೆಯ ಆಯುಕ್ತ ರಂದೀಫ್ ಇವರಿಂದ ಪಾರಿತೋಷಕ ಮತ್ತು ಪ್ರಮಾಣ ಪತ್ರ ಸ್ವೀಕರಿಸಿದರು.
ತಮ್ಮ ಸಾಧನೆಯ ಮೂಲಕ ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಹೆಮ್ಮೆ ತಂದಿರುವ ಇವರನ್ನು ಸಂಸ್ಥೆಯ ನಿರ್ದೇಶಕ ಡಾ. ರವಿಕುಮಾರ್ ಬಿ.ಸಿ ಹಾಗೂ ಆಡಳಿತ ವರ್ಗದವರು ಅಭಿನಂದಿಸಿರುತ್ತಾರೆ.