ಅರಸೀಕೆರೆ: ಜಿಲ್ಲಾ ಕಾಂಗ್ರೆಸ್ ಇಂಟರ್ ವಿಭಾಗದ ಪ್ರಧಾನ ಕಾರ್ಯದರ್ಶಿಯನ್ನಾಗಿ ಮಂಜುನಾಥ ಅವರನ್ನು ರಾಜ್ಯ ಕಾಂಗ್ರೆಸ್ ನಿಯೋಜನೆ ಮಾಡಿದೆ.
ಪಕ್ಷದ ನೂತನ ಜವಾಬ್ದಾರಿಯನ್ನು ವಹಿಸಿಕೊಂಡಿರುವ ಮಂಜುನಾಥ ಸುದ್ದಿಗಾರರೊಂದಿಗೆ ಮಾತನಾಡಿ ಈವರೆಗೂ ಪಕ್ಷ ನೀಡಿದ ನಾನಾ ಜವಾಬ್ದಾರಿಗಳನ್ನ ನಿಭಾಯಿಸಿರುವ ಅನುಭವದ ಜತೆಗೆ ಗ್ರಾಮ ಪಂಚಾಯಿತಿ ಸದಸ್ಯನಾಗಿಯೂ ಸಹ ಸಾರ್ವಜನಿಕರ ಸೇವೆಯಲ್ಲಿರುವ ನನ್ನನ್ನು ಸ್ಥಳೀಯ ಕಾಂಗ್ರೆಸ್ ಮುಖಂಡರು ಸೇರಿದಂತೆ ಜಿಲ್ಲೆ ಹಾಗೂ ರಾಜ್ಯದ ನಮ್ಮ ನಾಯಕರು ನನ್ನನ್ನು ಗುರುತಿಸಿ ಜಿಲ್ಲಾ ಕಾಂಗ್ರೆಸ್ ಇಂಟರ್ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿರುವುದು ವೈಯಕ್ತಿಕವಾಗಿ ಸಂತೋಷವಾಗಿದೆ ಅಲ್ಲದೆ ಮುಂದಿನ ದಿನಗಳಲ್ಲಿ ಜಿಲ್ಲಾಧ್ಯಂತ ಹಿರಿಯ ಮುಖಂಡರ ಮಾರ್ಗದರ್ಶನ ಮತ್ತು ಸ್ಥಳೀಯ ಕಾರ್ಯಕರ್ತರನ್ನು ವಿಶ್ವಾಸಕ್ಕೆ ಪಡೆದುಕೊಂಡು ಜಿಲ್ಲೆಯಲ್ಲಿ ಕಾಂಗ್ರೆಸ್ ಸಂಘಟನೆಗೆ ಒತ್ತು ನೀಡುವುದಾಗಿ ಭರವಸೆ ನೀಡಿದರು.
ನೂತನ ಜವಾಬ್ದಾರಿ ವಹಿಸಿಕೊಂಡಿರುವ ಮಂಜುನಾಥ ಅವರಿಗೆ ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಅಭಿನಂದಿಸಿ ಶುಭ ಕೋರಿದ್ದಾರೆ.